ಕರೋನಾ ಕರೋನಾ ಕರೋನಾ,
ಹೇಗೆ ಕಳೆಯಲಿ ನಾ ಸಮಯಾನಾ!
ಹೊರಗೆ ಹೋದರೆ ಪೋಲೀಸ್ ಕಾಟ,
ಮನೇಲೇ ಕುಳಿತರೆ ಹೆಂಡತಿ ಪಾಠ.
ವಾಟ್ಸಾಪ್ ನೋಡಿದ್ರೆ ಜ್ವರ ಬರುತ್ತೆ,
ಟಿವಿ ನೋಡಿದ್ರೆ ಹೆದ್ರಿಕೆ ಆಗುತ್ತೆ!
ಕೆಮ್ಮು ಬಂದರೆ ಭಯ ಆಗುತ್ತೆ,
ಸೀನು ಬಂದರೆ ಪ್ರಾಣ ಹೋಗುತ್ತೆ.
ಗುಡಿಯಲಿ ಕೂತು ಬೇಡೋಣಾಂದ್ರೆ,
ಅದಕ್ಕೂ ಇದೆಯಲ್ಲ ತೊಂದ್ರೆ!
ಗೆಳೆಯರು ಮಕ್ಕಳು ಮೊಮ್ಮಕ್ಳೆಲ್ಲ,
ವಿಡಿಯೋದಲ್ಲೇ ಹಾಯ್ ಬಾಯೆಲ್ಲ .
ಮುಂಜಾನೆ ಪಾರ್ಕಲಿ ಸುತ್ತಾಟವಿಲ್ಲ,
ಹಾಟ್ ಕಾಫಿಯಲಿ ಮೀಟಿಂಗಿಲ್ಲ.
ಪುಸ್ತಕ ಹಿಡಿದರೂ ಓದೋಕಾಗಲ್ಲ,
ಏನೋ ಯೋಚನೆ ಬರುತ್ತಲ್ಲ.
ಮನಸ್ಸಿಗಂತೂ ನೆಮ್ಮದಿಯಿಲ್ಲ,
ಸುಮ್ನೆ ಕೂರೋಕೆ ಆಗ್ತಾ ಇಲ್ಲ.
ಹಾಲು ಪ್ಯಾಕೆಟ್ ಮೇಲೇನಿರುತ್ತೋ,
ನ್ಯೂಸ್ ಪೇಪರಿಗೆ ಸೋಂಕಾಗಿರುತ್ತೋ,
ತರಕಾರಿ ತರೋದೆ ಬೇಡ ಅನ್ಸುತ್ತೆ,
ತಿಂಗಳ ದಿನಸಿ ಸಾಕಾಗುತ್ತೆ.
ಚೀನಾಲಿ ಯಾರೋ ಏನೋ ತಿಂದ್ರೆ,
ಪ್ರಪಂಚಕೆಲ್ಲ ದೊಡ್ಡ ತೊಂದ್ರೆ!
ಕೈ ತೊಳೆದೂ ತೊಳೆದೂ ಸುಸ್ತಾಯ್ತು,
ಟ್ಯಾಂಕಿನ ನೀರೆಲ್ಲ ಖರ್ಚಾಯ್ತು!
ಮನೇಲೆ ಸ್ವಲ್ಪ ವಾಕಿಂಗ್ ಮಾಡ್ದೆ.
ಅಲ್ಲೇ ಸ್ವಲ್ಪ ಜಾಗಿಂಗ್ ಮಾಡ್ದೆ.
ಏನು ಮಾಡ್ಲಿ ದೇವ್ರೆ, ಅಯ್ಯೋ!
ಇನ್ನೇನು ಮಾಡ್ಲಿ ದೇವ್ರೆ!
ಹೇಗೆ ಕಳೆಯಲಿ ನಾ ಸಮಯಾನಾ!
ಹೊರಗೆ ಹೋದರೆ ಪೋಲೀಸ್ ಕಾಟ,
ಮನೇಲೇ ಕುಳಿತರೆ ಹೆಂಡತಿ ಪಾಠ.
ವಾಟ್ಸಾಪ್ ನೋಡಿದ್ರೆ ಜ್ವರ ಬರುತ್ತೆ,
ಟಿವಿ ನೋಡಿದ್ರೆ ಹೆದ್ರಿಕೆ ಆಗುತ್ತೆ!
ಕೆಮ್ಮು ಬಂದರೆ ಭಯ ಆಗುತ್ತೆ,
ಸೀನು ಬಂದರೆ ಪ್ರಾಣ ಹೋಗುತ್ತೆ.
ಗುಡಿಯಲಿ ಕೂತು ಬೇಡೋಣಾಂದ್ರೆ,
ಅದಕ್ಕೂ ಇದೆಯಲ್ಲ ತೊಂದ್ರೆ!
ಗೆಳೆಯರು ಮಕ್ಕಳು ಮೊಮ್ಮಕ್ಳೆಲ್ಲ,
ವಿಡಿಯೋದಲ್ಲೇ ಹಾಯ್ ಬಾಯೆಲ್ಲ .
ಮುಂಜಾನೆ ಪಾರ್ಕಲಿ ಸುತ್ತಾಟವಿಲ್ಲ,
ಹಾಟ್ ಕಾಫಿಯಲಿ ಮೀಟಿಂಗಿಲ್ಲ.
ಪುಸ್ತಕ ಹಿಡಿದರೂ ಓದೋಕಾಗಲ್ಲ,
ಏನೋ ಯೋಚನೆ ಬರುತ್ತಲ್ಲ.
ಮನಸ್ಸಿಗಂತೂ ನೆಮ್ಮದಿಯಿಲ್ಲ,
ಸುಮ್ನೆ ಕೂರೋಕೆ ಆಗ್ತಾ ಇಲ್ಲ.
ಹಾಲು ಪ್ಯಾಕೆಟ್ ಮೇಲೇನಿರುತ್ತೋ,
ನ್ಯೂಸ್ ಪೇಪರಿಗೆ ಸೋಂಕಾಗಿರುತ್ತೋ,
ತರಕಾರಿ ತರೋದೆ ಬೇಡ ಅನ್ಸುತ್ತೆ,
ತಿಂಗಳ ದಿನಸಿ ಸಾಕಾಗುತ್ತೆ.
ಚೀನಾಲಿ ಯಾರೋ ಏನೋ ತಿಂದ್ರೆ,
ಪ್ರಪಂಚಕೆಲ್ಲ ದೊಡ್ಡ ತೊಂದ್ರೆ!
ಕೈ ತೊಳೆದೂ ತೊಳೆದೂ ಸುಸ್ತಾಯ್ತು,
ಟ್ಯಾಂಕಿನ ನೀರೆಲ್ಲ ಖರ್ಚಾಯ್ತು!
ಮನೇಲೆ ಸ್ವಲ್ಪ ವಾಕಿಂಗ್ ಮಾಡ್ದೆ.
ಅಲ್ಲೇ ಸ್ವಲ್ಪ ಜಾಗಿಂಗ್ ಮಾಡ್ದೆ.
ಏನು ಮಾಡ್ಲಿ ದೇವ್ರೆ, ಅಯ್ಯೋ!
ಇನ್ನೇನು ಮಾಡ್ಲಿ ದೇವ್ರೆ!