ಚುಟುಕು: ನಾಲ್ಕು ಸಾಲುಗಳ ಕವನ. ಅಂತ್ಯಪ್ರಾಸ ಕಡ್ಡಾಯ
ದತ್ತಪದ : ಬದಲಾವಣೆ
ಇರಬೇಕು ಸಹನೆ ತಪ್ಪಿಸಲು ಬಲು ಬವಣೆಕರಗಿಸುತ ಕೋಪವನು ಸಹನೆಗೆ ಹಾಕು ಮಣೆ
ಸುರಿಯುವುದು ಎದೆಯಲ್ಲಿ ದಯೆ ಮತ್ತು ಕರುಣೆ
ತರುವುದು ಬದುಕಿನಲಿ ಸುಂದರ ಬದಲಾವಣೆ
ದತ್ತಪದ : ಧಾರಾಕಾರ
ಧಾರಾಕಾರ ಮಳೆಗೆ ರಸ್ತೆಗಳು ನದಿಯ ಧಾರ,
ವಾಹನ ಸಂಚಾರವಾಯಿತು ಬಹಳ ದುಸ್ತರ!
ಜನತೆ ಕೇಳಿತು ಸರ್ಕಾರವ ಏಕೀ ಅವಾಂತರ?
ಹಿಂದಿನ ಸರ್ಕಾರವ ದೂರಿತು ಈಗಿನ ಸರ್ಕಾರ!
ನನ್ನ ಮೊದಲ ಸ್ಪರ್ಶ ನೀನಮ್ಮ,
ನನ್ನ ಮೊದಲ ಪರಿಚಯ ನೀನಮ್ಮ,
ನಿನ್ನೆದೆಯ ಬಡಿತ ಜೋಗುಳವಮ್ಮ,
ನನ್ನ ಮೊದಲ ತೊದಲೇ "ಅಮ್ಮ"!
ದಸರೆಯು ತಂದಿಹುದು ಸಂಭ್ರಮಾನಂದ
ನವದುರ್ಗೆಯರ ಆರಾಧನೆಯ ಭಕ್ತಿಬಂಧ
ಜಂಬೂ ಸವಾರಿಯ ವೈಭವದ ಚೆಂದ
ನವೀಕರಿಸುತ ಎಲ್ಲರಲಿ ಸ್ನೇಹ ಸಂಬಂಧ